ಶಾಕಿಂಗ್‌ ನ್ಯೂಸ್ : ಕರ್ನಾಟಕದಲ್ಲಿ ಇಂದು 388 ಮಂದಿಗೆ ಕೊರೋನಾ ಪಾಸಿಟಿವ್..!

ಒಂದೆಡೆ ರಾಜ್ಯ ಸರ್ಕಾರ ಅನ್‌ಲಾಕ್ ಗೆ ಅವಕಾಶ ಕಲ್ಪಿಸಲು ಮುಂದಾಗಿರುವ ಬೆನ್ನಲ್ಲೇ ಇಂದು ರಾಜ್ಯದಲ್ಲಿ ಕೊರೋನಾ ಕೇಕೆ ಸಹ ಅಬ್ಬರಿಸಿದೆ.


ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿ ಒಂದೇ ದಿನ ರಾಜ್ಯದಲ್ಲಿ 388 ಹೊಸ ಸೋಂಕಿತರು ಪತ್ತೆಯಾಗಿದ್ದು ಜನರಲ್ಲಿ ಗಾಬರಿ ಮೂಡಿಸಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ.


ರೋಗ ಲಕ್ಷಣವಿಲ್ಲದವರಿಗೂ ಕೊರೊನಾ ಸೋಂಕು ...


ಇಲ್ಲಿಯವರೆಗೆ 200ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಆದರೆ ಒಂದೇ ದಿನ 380ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಸೋಮವಾರದವರೆಗೆ ರಾಜ್ಯದಲ್ಲೇ ಬೆಂಗಳೂರಿನಲ್ಲಿ(385) ಅತ್ಯಧಿಕ ಪ್ರಕರಣ ದಾಖಲಾಗಿತ್ತು.


ಪತ್ತೆಯಾಗಿರುವ 388 ಪ್ರಕರಣಗಳ ಪೈಕಿ 363 ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಿಂದಲೇ ಪತ್ತೆಯಾಗಿದೆ. ಉಡುಪಿಯಲ್ಲಿ 150 ಪ್ರಕರಣ ಮತ್ತು ಕಲಬುರಗಿಯಲ್ಲಿ 100 ಪತ್ತೆಯಾಗಿದ್ದು ಮಹಾ ನಂಜಿಗೆ ಅಕ್ಷರಶಃ ತತ್ತರಿಸಿ ಹೋಗಿವೆ.


ಉಡುಪಿ 150, ಕಲಬುರಗಿ 100, ಬೆಳಗಾವಿ 51, ರಾಯಚೂರು 16, ಬೆಂಗಳೂರು ನಗರ 12, ಬೀದರ್ 10, ಬಾಗಲಕೋಟೆ ಹಾಸನ 9, ದಾವಣಗೆರೆ 7, ಯಾದಗಿರಿ 5, ಮಂಡ್ಯ, ವಿಜಯಪುರದಲ್ಲಿ ತಲಾ 4, ಬೆಂಗಳೂರು ಗ್ರಾಮಾಂತರ 3, ಚಿಕ್ಕಬಳ್ಳಾಪುರ, ಧಾರವಾಡ, ಚಿಕ್ಕಮಗಳೂರಿನಲ್ಲಿ ತಲಾ 2, ಕೋಲಾರ, ಹಾವೇರಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿವೆ.


ಮುಂದುವರೆದ ಕೊರೊನಾ ವೈರಸ್ ಮರಣಮೃದಂಗ ...


ಈ ಬೆಳವಣಿಗೆಯೊಂದಿಗೆ ಉಡುಪಿ ಹಾಗೂ ಕಲಬುರ್ಗಿ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳುರೂನ್ನು ಹಿಂದಿಕ್ಕಿ ಮೊದಲೆರಡು ಸ್ಥಾನ ಆಕ್ರಮಿಸಿಕೊಂಡಿವೆ.


ಒಟ್ಟು 410 ಪ್ರಕರಣಗಳೊಂದಿಗೆ ಉಡುಪಿ ಈಗ ರಾಜ್ಯದ ಕೊರೋನಾ ಕಾರಸ್ಥಾನವಾಗಿದ್ದರೇ ಕಲಬುರ್ಗಿ 405 ಪ್ರಕರಣಗಳನ್ನು ಕಂಡಿದೆ.
ದಕ್ಷಿಣ ಕನ್ನಡ, ಮೈಸೂರು, ಉತ್ತರ ಕನ್ನಡ, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ , ಗದಗ, ಚಿಕ್ಕಮಗಳೂರು, ಕೊಪ್ಪಳ, ಕೊಡಗು, ರಾಮನಗರದಲ್ಲಿ ಇಂದು ಯಾವುದೇ ಪಾಸಿಟಿವ್ ವರದಿಯಾಗಿಲ್ಲ.



ರಾಜ್ಯದಲ್ಲಿ ಇಂದೂ ಮುಂದುವರೆದ ಕೊರೊನಾ ...


ಮಂಡ್ಯ 20, ಧಾರವಾಡ 15, ಬಳ್ಳಾರಿ 11, ಬೆಳಗಾವಿ 9, ಉತ್ತರ ಕನ್ನಡ 5, ತುಮಕೂರು 5, ಕೋಲಾರ 4, ಹಾವೇರಿ 3, ವಿಜಯಪುರದಲ್ಲಿ 3 ಮಂದಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.


3,796 ಪ್ರಕರಣಗಳ ಪೈಕಿ 1403 ಮಂದಿ ಗುಣಮುಖರಾಗಿದ್ದಾರೆ. ಇನ್ನು 2339 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟಾರೆ 52 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.



ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...