ಸಂಜೀವಿನಿ ಗಿಡವಾದ ಸಾಂಬ್ರಾಣಿ ಗಿಡದಲ್ಲಿದೆ ಹತ್ತಾರು ಆರೋಗ್ಯ ಲಾಭಗಳು..!

ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಬೆಳೆಯುವುದರಿಂದ ಹಲವು ರೀತಿಯ ಉಪಯೋಗ ಪಡೆಯಬಹುದು.



ಮನೆಯ ಹಿತ್ತಲಿನಲ್ಲಿದ್ದ ಗಿಡವನ್ನೇ ಜ್ವರ, ಶೀತ ಸೇರಿದಂತೆ ಹಲವು ಕಾಯಿಲೆಗಳಿಗೆ ಮದ್ದಾಗಿ ಬಳಸಿಕೊಳ್ಳಬಹುದು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನ.
ಇದನ್ನು ಸಾಂಬ್ರಾಣಿ, ಸಂಬಾರಬಳ್ಳಿ, ಅಜವಾನದೆಲೆ, ಕರ್ಪೂರವಳ್ಳಿ, ಚೆಂಪರವಳ್ಳಿ ಹೀಗೆ ಹಲವು ಹೆಸರುಗಳಿಂದ ಕರೆಯುತ್ತೇವೆ. ಎಲೆಗಳು ದಪ್ಪವಾಗಿದ್ದಿ, ನೀರಿನ ಅಂಶ ಹೆಚ್ಚಿರುತ್ತದೆ. ಎಲೆಗಳನ್ನು ಕೊಯ್ದು ಸ್ವಲ್ಪ ಬೆಂಕಿಯಲ್ಲಿ ಬಾಡಿಸಿ ಹಿಂಡಿದರೆ ನೀರು ಸಿಗುತ್ತದೆ.


ಮನೆ ಮದ್ದು; ಶೀತ, ಜ್ವರಕ್ಕೆ ಈ ಹಿತ್ತಲ ಗಿಡ ...

ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ದೊಡ್ಡಪತ್ರೆ ಎಲೆಗಳ ರಸ ಮತ್ತು ಅಷ್ಟೇ ಪ್ರಮಾಣದ ಎಳ್ಳೆಣ್ಣೆಯನ್ನು ನಿತ್ಯ ತಲೆಗೆ ಹಚ್ಚಿಕೊಳ್ಳುವುದರಿಂದ ಕಣ್ಣುರಿ ಕಡಿಮೆಯಾಗುತ್ತದೆ.
ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನಿನೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ. ಪದೇಪದೆ ಮಕ್ಕಳಲ್ಲಿ ಕಾಡುವ ಕಫ ಕೆಮ್ಮು ಶೀತಕ್ಕೆ ನಾಲ್ಕೈದು ಸಾಂಬ್ರಾಣಿ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ರಸ ಹಿಂಡಿ ಜೇನು ಬೆರೆಸಿ ಕುಡಿಸಿದರೆ ಕೆಮ್ಮು, ಕಫ ಕಡಿಮೆಯಾಗುತ್ತದೆ. ಶೀತದಿಂದಾಗಿ ಮಕ್ಕಳಿಗೆ ಮಲಬದ್ಧತೆಯಾದರೆ ಎಲೆಗಳ ರಸದಲ್ಲಿ ಜೇನುತುಪ್ಪ ಬೆರೆಸಿ ಕುಡಿಸಬೇಕು.
ಒಂದು ವಾರದವರೆಗೆ ದೊಡ್ಡಪತ್ರೆ ಎಲೆಯ ರಸವನ್ನು ಸೇವಿಸುವುದರಿಂದ ಹಳದಿ ರೋಗ ನಿವಾರಣೆಯಗುತ್ತದೆ. ಚೇಳು ಕಡಿದ ಜಾಗಕ್ಕೆ ದೊಡ್ಡಪತ್ರೆ ರಸವನ್ನು ಹಚ್ಚಿದರೆ ನೋವು ನಿವಾರಣೆಯಾಗುತ್ತದೆ. ಉಪ್ಪು ಸೇರಿಸಿ ತಿನ್ನುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.


ಈ ಎಲೆಗಳಲ್ಲಿ ಹತ್ತಾರು ರೀತಿಯ ಔಷಧಿಯ ...
ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದಾಗ ಆ ಜಾಗಕ್ಕೆ ಹಸಿಯಾಗಿ ಸಾಂಬ್ರಾಣಿ ಎಲೆಗಳನ್ನು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ. ಪತ್ರೆಯ ರಸವನ್ನು ಮೊಸರಿನಲ್ಲಿ ಬೆರೆಸಿ ಮುಖ, ಕೈಕಾಲುಗಳಿಗೆ ಹಚ್ಚಿಕೊಳ್ಳವುದರಿಂದ ಕಾಂತಿಯುಕ್ತವಾಗುತ್ತದೆ. ನಾರಿನಂಶ, ಜೀವಸತ್ವ ಹಾಗೂ ಕಬ್ಬಿಣಾಂಶಗಳ ಆಗರವಾಗಿರುವ ಸಾಂಬ್ರಾಣಿ ಸೊಪ್ಪನ್ನು ಹಾಗೆಯೇ ಜಗಿದು ತಿನ್ನಬಹುದು.
ಎಲೆಗಳಿಂದ ಕಷಾಯ ಮಾಡಿ ಕುಡಿದರೆ ಕೆಮ್ಮು, ಉಬ್ಬಸ ಕಡಿಮೆಯಾಗುತ್ತದೆ. ಎಳ್ಳೆಣ್ಣೆಗೆ ದೊಡ್ಡಪತ್ರೆ ರಸವನ್ನು ಸೇರಿಸಿ ತಲೆಗೆ ಹಚ್ಚುವುದರಿಂದ ತಲೆ ತಂಪಾಗುತ್ತದೆ. ಎಲೆಗಳನ್ನು ಚಟ್ನಿ, ತಂಬುಳಿ ಮೊದಲಾದವುಗಳನ್ನು ಸೇವಿಸಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ.
ಒಟ್ಟಿನಲ್ಲಿ ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಬೆಳೆಯುವುದರಿಂದ ಹಲವು ರೀತಿಯ ಉಪಯೋಗ ಪಡೆಯಬಹುದು ಎಂಬುವುದರಲಿ ಎರಡು ಮಾತಿಲ್ಲ


ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...