ಎಸ್.ಎಂ. ಕೃಷ್ಣ ಮೊಮ್ಮಗ, ಕಾಫಿ ಡೇ ಉದ್ಯಮಿ ಸಿದ್ಧಾರ್ಥ್ ಪುತ್ರನೊಂದಿಗೆ ಡಿಕೆಶಿ ಪುತ್ರಿ ಮದುವೆ ಮಾತುಕತೆ

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರ ಮೊಮ್ಮಗ, ಕಾಫಿ ಡೇ ಉದ್ಯಮಿ ದಿ. ಸಿದ್ದಾರ್ಥ್ ಹೆಗಡೆ ಅವರ ಪುತ್ರ ಅಮಾರ್ತ್ಯ ಹೆಗ್ಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಅವರ ಮದುವೆ ಮಾತುಕತೆ ನಡೆದಿದೆ.



ಎರಡು ಕುಟುಂಬದ ಹಿರಿಯರು ಸೇರಿ ಮದುವೆ ಮಾತುಕತೆ ನಡೆಸಿದ್ದು ಈ ವರ್ಷದೊಳಗೆ ಮದುವೆ ನಡೆಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಎಸ್.ಎಂ. ಕೃಷ್ಣ ಅಳಿಯ ದಿ. ಸಿದ್ದಾರ್ಥ್ ಹೆಗ್ಡೆ ಜೊತೆಗೆ ಸ್ನೇಹ ಸಂಬಂಧ ಹೊಂದಿದ್ದ ಡಿ.ಕೆ. ಶಿವಕುಮಾರ್ ಮದುವೆ ಕುರಿತಾಗಿ ಎಸ್‌ಎಂ ಕೃಷ್ಣ ಅವರೊಂದಿಗೆ ಚರ್ಚಿಸಿದ್ದು, ಮದುವೆಗೆ ಎರಡು ಕುಟುಂಬದವರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.


Aishwarya Shivakumar: ಎಸ್‌ಎಂ ಕೃಷ್ಣ ಮೊಮ್ಮಗನ ...

ಅಮೆರಿಕದಲ್ಲಿ ಓದಿರುವ ಅಮಾರ್ತ್ಯ ಹೆಗಡೆ ಸದ್ಯ ಕಂಪನಿ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಸಂಸ್ಥೆಯೊಂದನ್ನು ನೋಡಿಕೊಳ್ಳುತ್ತಿದ್ದಾರೆ. ಇವರ ಮದುವೆ ಮಾತುಕತೆ ನಡೆದಿದ್ದು, ಈ ವರ್ಷಾಂತ್ಯಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗಿದೆ.

ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...