ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಸಿಇಟಿ-2020 ನೇ ಸಾಲಿನಲ್ಲಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಇಚ್ಛಿಸುವವರಿಗೆ ತಿದ್ದುಪಡಿ ಮಾಡಿಕೊಳ್ಳಲು ಮತ್ತೊಂದು ಅವಕಾಶ ನೀಡಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂಊರು ಕೇಂದ್ರದಲ್ಲಿಯೂ ಕನ್ನಡ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳನ್ನು ಜೂ. 29 ರವರೆಗೆ ಬದಲಾಯಸಿಕೊಳ್ಳಲು ಕೆಇಎ ಅವಕಾಶ ನೀಡಿದೆ.

ಅಭ್ಯರ್ಥಿಗಳ ಮನವಿ ಮೇರೆಗೆ ರಬಕವಿ ಬನಹಟ್ಟಿ ತಾಲೂಕಿನಲ್ಲಿಯೂ ಪರೀಕ್ಷಾ ಕೇಂದ್ರವನ್ನು ತೆರೆದಿದೆ. ಹೆಚ್ಚಿನ ಮಾಹಿತಿಗಾಗಿ https://cetonline.karnataka.gov.in/kea/ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.