ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಶಿಲಾನ್ಯಾಸ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಪಸ್ಥಿತರಿರಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಅಯೋಧ್ಯೆಯಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆದಿದ್ದು, ಶಿಲಾನ್ಯಾಸ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ.
ಶಿಲಾನ್ಯಾಸ ಸಂದರ್ಭದಲ್ಲಿ ಹನುಮ ಹುಟ್ಟಿದ ನಾಡು ಎಂಬ ಪ್ರಸಿದ್ಧಿ ಹೊಂದಿರುವ ಕರ್ನಾಟಕದ ಹಂಪಿಯಿಂದ ಶಿಲೆಯೊಂದನ್ನು ಕಳುಹಿಸಿಕೊಡಲು ಶ್ರೀ ರಾಮಸೇನೆ ಸಿದ್ಧತೆ ನಡೆಸಿದೆ.
ಈ ಶಿಲೆಗೆ ಬೆಳ್ಳಿ ಕವಚ ತೊಡಿಸಿ ಪೂಜೆ ಸಲ್ಲಿಸಿದ ಬಳಿಕ ವಿಜಯಪುರ - ಭಟ್ಕಳ ಮೂಲಕ ಉಡುಪಿಗೆ ಕಳುಹಿಸಿ ಅಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಮುಖಾಂತರ ಅಯೋಧ್ಯೆಗೆ ಕಳುಹಿಸಿ ಕೊಡಲಾಗುತ್ತದೆ.