ಜುಲೈ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಗೆ ಅವರ ‘ಸಖತ್’ ಸಿನಿಮಾ ಉಡುಗೊರೆಯೊಂದನ್ನು ನೀಡಲಿದೆ.
ಗಣೇಶ್ ಈ ಬಾರಿ ಕೊರೋನಾ ಕಾರಣದಿಂದ ಅಭಿಮಾನಿಗಳ ಜತೆ ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿಕೊಳ್ಳುವುದಿಲ್ಲ ಎಂದು ಈಗಾಗಲೇ ಘೋಷಿಸಿದ್ದಾರೆ.

ಆದರೆ ಅವರ ಅಭಿಮಾನಿಗಳಿಗೆ ನಿರಾಸೆಯಾಗಬಾರದು ಎಂದು ‘ಸಖತ್’ ಚಿತ್ರತಂಡ ಮೋಷನ್ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಿದೆ. ಜುಲೈ 1 ರಂದು ಅಂದರೆ ನಾಳೆ ಸಂಜೆ 6 ಗಂಟೆಗೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಪೋಸ್ಟರ್ ಬಿಡುಗಡೆಯಾಗಲಿದೆ.