ಮಾನವನ ದೇಹದ 75 ಪ್ರತಿಶತ ಭಾಗ ನೀರಿನಿಂದ ಮಾಡಲ್ಪಟ್ಟಿದೆ ಎಂದು ವಿಜ್ಞಾನ ಹೇಳುತ್ತದೆ, ನೀರು ನಮ್ಮ ದೇಹಕ್ಕೆ ಅತೀ ಅವಶ್ಯಕ, ದೇಹದ ಶೇ 75ರಷ್ಟು ಭಾಗದಲ್ಲಿ ನೀರಿರುವುದರಿಂದ ನಮ್ಮ ದೇಹಕ್ಕೆ ಹೆಚ್ಚಿನ ನೀರು ಬೇಕಾಗುತ್ತದೆ. ಇಷ್ಟು ಮಾತ್ರವಲ್ಲದೆ ನೀರು ಕುಡಿಯುವುದರಿಂದ ದೇಹದ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸುವುದು, ದೇಹದಲ್ಲಿನ ನೀರು ರಕ್ತ ಸಂಚಾರವನ್ನು ಹೆಚ್ಚಿಸುವುದಲ್ಲದೆ ಆಹಾರದಿಂದ ಪಡೆದಿರುವಂತಹ ಪ್ರಮುಖ ಪೋಷಕಾಂಶಗಳನ್ನು ವಿವಿಧ ಅಂಗಾಂಗಗಳು ಹಾಗೂ ಕೋಶಗಳಿಗೆ ತಲುಪಿಸುವಂತಹ ಕೆಲಸವನ್ನು ನೀರು ಮಾಡುತ್ತದೆ.
ಸಾಮಾನ್ಯ ಸ್ಥಿತಿಯಲ್ಲಿ ಇದು 71% ರಷ್ಟಿರುತ್ತದೆ, ದೇಹದ ಎಲ್ಲಾ ಕಾರ್ಯಗಳಿಗೆ ನೀರು ಅಗತ್ಯವಾಗಿ ಬೇಕೇ ಬೇಕು ಮತ್ತು ನೀರಿಲ್ಲದ ಪರಿಸ್ಥಿತಿಯನ್ನು ನಿರ್ಜಲೀಕರಣ ಎಂದು ಕರೆಯಲಾಗುತ್ತದೆ ಹಾಗೂ ಈ ಸ್ಥಿತಿಯಲ್ಲಿ ದೇಹದ ಪ್ರಮುಖ ಅಂಗಗಳಿಗೆ ನೀರಿನ ಪೂರೈಕೆಯಾಗದೇ ಇವು ಒಣಗತೊಡಗುತ್ತವೆ ಮತ್ತು ಪ್ರತಿ ಅಂಗಾಂಶ ಕಾರ್ಯನಿರ್ವಹಿಸಲು ನೀರು ಬೇಕು.
ಜೀವಕೋಶದ ಹಂತದಲ್ಲಿ ನೀರನ್ನು ಬಳಸಿಕೊಂಡು ಆರೋಗ್ಯ ಕಾಪಾಡುತ್ತದೆ ಅಷ್ಟೇ ಅಲ್ಲದೆ ರಕ್ತದ ಮೂಲಕ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ಕೊಂಡೊಯ್ಯಲೂ ನೀರು ಬೇಕು ಆದರೆ ಎಷ್ಟೋ ಜನರಿಗೆ ನೀರು ಕುಡಿಯುವ ಸರಿಯಾದ ವಿಧಾನವೇ ತಿಳಿದಿಲ್ಲ. ಬಹಳ ಜನರಿಗಿರುವ ಒಂದು ಕೆಟ್ಟ ಹವ್ಯಾಸ ಎಂದರೆ ಅದು ನಿಂತುಕೊಂಡು ನೀರು ಕುಡಿಯುವುದು ಆದರೆ ವಿಜ್ಞಾನದ ಹಲವು ಸಂಶೋಧನೆಗಳ ಪ್ರಕಾರ ನಿಂತುಕೊಂಡು ನೀರು ಕುಡಿಯುವುದು ದೇಹಕ್ಕೆ ಅತ್ಯಂತ ಅಪಾಯಕಾರಿ ಎನ್ನಲಾಗಿದೆ. ಹಾಗಾದರೆ ನಿಂತುಕೊಂಡು ನೀರು ಕುಡಿಯುವುದರಿಂದ ಏನಾಗುತ್ತದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನೀವು ಕೂಡ ನಿಂತುಕೊಂಡು ನೀರು ಕುಡಿಯುತ್ತಿದ್ದರೆ ಇಂದೇ ಅದನ್ನ ನಿಲ್ಲಿಸುವುದು ಬಹಳ ಒಳ್ಳೆಯದು.
ಹೌದು ತಜ್ಞರು ಹೇಳುವ ಪ್ರಕಾರ ನಾವು ನಿಂತು ನೀರು ಕುಡಿಯಲೇ ಬಾರದು ಇದರಿಂದ ದೇಹಕ್ಕೆ ಬಹಳ ಅಪಾಯಗಳಾಗಬಹುದು. ನಿಂತು ನೀರು ಕುಡಿಯುವುದರಿಂದ ಜೀರ್ಣದ ಸಮಸ್ಯೆ ಎದುರಾಗಬಹುದು ಮತ್ತು ನರಮಂಡಲದಲ್ಲಿ ಒತ್ತಡ ಹೆಚ್ಚಾಗುತ್ತದೆ ಹಾಗೆ ಹೃದಯ ಹಾಗೂ ಶ್ವಾಸಕೋಶದ ಆರೋಗ್ಯಕ್ಕೂ ಒಳ್ಳೆಯದಲ್ಲ. ಇನ್ನು ನಿಂತುಕೊಂಡು ನೀರು ಕುಡಿಯುವಾಗ ಅನ್ನನಾಳದ ಮೂಲಕ ನೀರು ವೇಗವಾಗಿ ಸಾಗುವುದರಿಂದ ಅನ್ನನಾಳಕ್ಕೆ ಹಾನಿಯಾಗುತ್ತದೆ. ನಿಂತುಕೊಂಡು ಈ ರೀತಿ ನೀರನ್ನು ಕುಡಿಯುವುದರಿಂದ ನಿಮ್ಮ ಬಾಯಾರಿಕೆ ತಣಿಯುವುದಿಲ್ಲ ಮತ್ತು ನೀರು ನೇರವಾಗಿ ಹಾದು ಹೋಗುವುದರಿಂದ ಅಗತ್ಯವಿರುವ ಪೋಷಕಾಂಶಗಳು ಮತ್ತು ಜೀವಸತ್ವಗಳು ಯಕೃತ್ತು ಮತ್ತು ಜೀರ್ಣಾಂಗವ್ಯೂಹವನ್ನು ತಲುಪುವುದಿಲ್ಲ.
ಕೇವಲ ವಿಜ್ಞಾನ ಮಾತ್ರವಲ್ಲ ನಮ್ಮ ಆಯುರ್ವೇದ ಶಾಸ್ತ್ರದಲ್ಲೂ ಕೂಡ ನಿಂತುಕೊಂಡು ನೀರು ಕುಡಿಯುವುದನ್ನು ಅಪಾಯ ಎಂದು ಸೂಚಿಸಲಾಗಿದೆ. ನಿಂತು ನೀರು ಕುಡಿದಾಗ ರಭಸವಾಗಿ ಗಂಟಲಿನಿಂದ ಇಳಿಯುವ ನೀರು ಅನ್ನನಾಳ ಹಾಗೂ ಹೊಟ್ಟೆ ಕೂಡುವ ಸ್ಥಳದಲ್ಲಿ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ ಇದರಿಂದ ಸ್ನಾಯುಗಳ ಮೇಲೆ ಒತ್ತಡ ಉಂಟಾಗಿ ಹೊಟ್ಟೆ ನೋವು ಬರಬಹುದು. ನೀರು ಒಮ್ಮೆಲೆ ದೇಹ ಸೇರಿದರೆ ಕಿಡ್ನಿಗೆ ಕೆಲಸದ ಒತ್ತಡ ಉಂಟಾಗಿ ನೀರನ್ನು ಸರಿಯಾಗಿ ಸೋಸಲು ಆಗುವುದಿಲ್ಲ ಮತ್ತು ಇದರಿಂದ ಕಿಡ್ನಿಗೆ ಹಾನಿಯಾಗಬಹುದು.
ಸ್ನೇಹಿತರೆ ನೀವು ಸಾಧ್ಯವಾದಷ್ಟು ದಣಿವಾದಾಗ ಅಥವಾ ಬಾಯಾರಿಕೆಯಾದಾಗ ಆತುರದಲ್ಲಿ ನೀರು ಕುಡಿಯಬೇಡಿ ಮತ್ತು ನಿಧಾನವಾಗಿ ಕುಳಿತುಕೊಂಡು ನೀರನ್ನು ಕುಡಿಯಿರಿ ಇದರಿಂದ ದೇಹಕ್ಕೆ ಬಹಳ ಒಳ್ಳೆಯದು.