ಬಿಗ್‌ ನ್ಯೂಸ್‌ : `SC-ST' ಮೀಸಲಾತಿ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರಕ್ಕೆ ಶಿಫಾರಸು, ಹೆಚ್ಚಾಗಲಿದೆ ಒಳಮೀಸಲಾತಿಯ ಬೇಡಿಕೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಪರಿಶಿಷ್ಟ ಜಾತಿಯವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಶೇ.2 ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 4 ರಷ್ಟುಉ ಹೆಚ್ಚಳ ಮಾಡಬಹುದೇ ಎಂಬ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚಿಸಿತ್ತು. ಇದೀಗ ಆಯೋಗವು ಮೀಸಲಾತಿ ಹೆಚ್ಚಳಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎನ್ನಲಾಗಿದೆ.
ಹಾಲಿ ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ ಶೇ. 7ರಷ್ಟು ಹೆಚ್ಚಳ ಮಾಡಲು ಆಯೋಗ ಶಿಫಾರಸು ಮಾಡಿದೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ. 2 ರಷ್ಟು ಹೆಚ್ಚಳ ಮಾಡಿ ಶೇ. 17 ಕ್ಕೆ ಹೆಚ್ಚಳ ಮಾಡಬೇಕೆಂದು ಶಿಫಾರಸು ಮಾಡಿದೆ ಎನ್ನಲಾಗಿದೆ. ಈ ನಡುವೆ ಅಲೆಮಾರಿ, ಅರೆ ಅಲೆಮಾರಿ, ಅರಣ್ಯವಾಸಿಗಳು, ಬುಡಕಟ್ಟು ಜನರ ಅಭಿವೃದ್ಧಿಗೆ ಒಳಮೀಸಲಾತಿ ಅಗತ್ಯ ಎನ್ನಲಾಗಿದ್ದು. ಹೀಗಾಗಿ ಒಳಮೀಸಲಾತಿ ಕಲ್ಪಿಸುವಂತೆ ಇದೀಗ ಬೇಡಿಕೆ ಹೆಚ್ಚಾಗಲಿದೆ.

ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...