ಅಮ್ಮ ಹಚ್ಚಿದೊಂದು ಹಣತೆ ಇನ್ನೂ ಬೆಳಗಿದೆ / amma hachidondu hanate ಕನ್ನಡ ಭಾವಗೀತ...

ಅಮ್ಮ ಹಚ್ಚಿದೊಂದು ಹಣತೆ
ಇನ್ನೂ ಬೆಳಗಿದೆ
ಮನಕೆ ಮಬ್ಬು ಕವಿಯದಂತೆ
ಸದಾ ಕಾದಿದೆ ।।

ಕಪ್ಪು ಕಡಲಿನಲ್ಲಿ ದೋಣಿ
ದಿಕ್ಕು ತಪ್ಪಲು
ದೂರದಲ್ಲಿ ತೀರವಿದೆ
ಎಂದು ತೋರಲು ।। ಅಮ್ಮ ।।

ಕೃತಕ ದೀಪ ಕತ್ತಲಲ್ಲಿ
ಕಳೆದು ಹೋಗದಂತೆ
ಸೂರ್ಯ ಚಂದ್ರ ತಾರೆಯಾಗಿ
ಹೊಳೆದು ಬಾಳುವಂತೆ ।। ಅಮ್ಮ ।।

ಅಂತರಂಗದಲ್ಲಿ ನೂರು
ಕಗ್ಗತ್ತಲ ಕೋಣೆ
ನಾದ ಬೆಳಕ ತುಂಬಲು
ಮಿಡಿದ ಹಾಗೆ ವೀಣೆ ।। ಅಮ್ಮ ।।

ಸಾಹಿತ್ಯ – M R ಕಮಲ
ಸಂಗೀತ – ಸಿ ಅಶ್ವಥ್
ಗಾಯನ – ಎಂ ಡಿ ಪಲ್ಲವಿ

ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...