Guava Leave Benefits for health:ಆಂಟಿಫಂಗಲ್ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿರುವ ಈ ಎಲೆಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಬುಡದಿಂದಲೇ ಕಿತ್ತು ಹಾಕುತ್ತದೆ.
Guava Leave Benefits for health : ಪೇರಳೆ ಹಣ್ಣಿನ ಪೋಷಕಾಂಶಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ನಮಗೆ ಮಾಹಿತಿ ಇದ್ದೇ ಇರುತ್ತದೆ. ಪೇರಳೆ ಹಣ್ಣು ಮಾತ್ರವಲ್ಲ ಅದರ ಎಲೆಗಳು ಕೂಡಾ ಆರೋಗ್ಯ ಸಂಜೀವಿನಿ ಇದ್ದ ಹಾಗೆ. ಆಂಟಿಫಂಗಲ್ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿರುವ ಈ ಎಲೆಗಳು, ಅನೇಕ ಆರೋಗ್ಯ ಸಮಸ್ಯೆಗಳನ್ನು ಬುಡದಿಂದಲೇ ಕಿತ್ತು ಹಾಕುತ್ತದೆ.

1 /5
ಹಲ್ಲುನೋವಿನಿಂದ ಬಳಲುತ್ತಿದ್ದರೆ ಪೇರಳೆ ಎಲೆಗಳನ್ನು ಅಗಿಯಬೇಕು. ಅಥವಾ ಪೇರಳೆ ಎಲೆಗಳನ್ನು ಕುದಿಸಿದ ನೀರಿನಿಂದ ಗಾರ್ಗಲ್ ಮಾಡಬೇಕು. ಹೀಗೆ ಮಾಡಿದರೆ ಹಲ್ಲು ನೋವಿನಿಂದ ಪರಿಹಾರ ಸಿಗುತ್ತದೆ.
![]() |
2 /5
ಬಾಯಿ ಹುಣ್ಣು ನಿವಾರಣೆಗೆ ಕೂಡಾ ಪೇರಳೆ ಎಲೆಗಳು ಸಹಾಯ ಮಾಡುತ್ತವೆ. ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಕುಡಿದರೆ ಮತ್ತು ಆ ನೀರಿನಿಂದ ಬಾಯಿ ಮುಕ್ಕಳಿಸುತ್ತಾ ಇದ್ದರೆ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.

3 /5
ವಾಕರಿಕೆ ಮತ್ತು ವಾಂತಿಯ ಸಂದರ್ಭದಲ್ಲಿ, ಪೇರಳೆ ಎಲೆಗಳ ಕಷಾಯವು ತ್ವರಿತ ಪರಿಹಾರವನ್ನು ನೀಡುತ್ತದೆ. ಈ ಕಷಾಯವನ್ನು ದಿನಕ್ಕೆ 2-3 ಬಾರಿ ಕುಡಿಯುವುದರಿಂದ ವಾಂತಿ ಸಮಸ್ಯೆ ಕಡಿಮೆಯಾಗುತ್ತದೆ.

4 /5
ಪೇರಳೆ ಎಲೆಗಳು ಅಸ್ತಮಾ ರೋಗಿಗಳಿಗೆ ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಅಸ್ತಮಾದಿಂದ ಬಳಲುತ್ತಿದ್ದರೆ ಪೇರಳೆ ಎಲೆ ಇದರಿಂದ ಪರಿಹಾರ ಸಿಗುತ್ತದೆ.

5 /5
ಪೇರಳೆ ಎಲೆಗಳನ್ನು ಸೇವಿಸುವುದರಿಂದ ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. (ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)
https://youtu.be/kNUx9p1Eka8